Saturday, October 12, 2013

ಡೊಳ್ಳು ಕುಣಿತ

ಡೊಳ್ಳು ಕುಣಿತ - ಒಂದು ಜನಪದ ಹಾಗೂ ಶಾಸ್ತ್ರೀಯ ಕಲೆ, ನೃತ್ಯ. ಡೊಳ್ಳು ಬಾರಿಸಿಕೊಂಡು ಕುಣಿಯುವುದರಿಂದ ಇದಕ್ಕೆ ಡೊಳ್ಳು ಕುಣಿತ ಎಂಬ ಹೆಸರು. ಡೊಳ್ಳು ಬೀರೇಶ್ವರ ದೇವರಿಗೆ ಅತಿ ಪ್ರಿಯವಾದ ವಾದ್ಯ. ಎಲ್ಲ ಬೀರೇಶ್ವರ ದೇವರ ಗುಡಿಗಳಲ್ಲಿ ಒಂದು ಡೊಳ್ಳನ್ನು ಕಟ್ಟಿರುತ್ತಾರೆ. ಕುರುಬ ಗೌಡ ಜನಾಂಗದ ಜನರು ಡೊಳ್ಳು ಕುಣಿತ ಮಾಡುತ್ತಾ ಬೀರೇಶ್ವರ ದೇವರನು ಪೂಜಿಸುತ್ತಾರೆ. ಕುಣಿತದ ಜೊತೆ ಹಾಲುಮತ ಕುರುಬ ಪುರಾಣವನ್ನು ಹಾಡುತ್ತಾರೆ. ಡೊಳ್ಳು ಕುಣಿತ ಮಾಡಲು ತುಂಬಾ ಶಕ್ತಿ ಮತ್ತು ಧೈರ್ಯ ಬೇಕು, ತಮ್ಮ ಯುದ್ಧ ಕಲೆಗಳಲ್ಲಿ ಇದು ಒಂದು ಕುರುಬರು ಬಾವಿಸುತಾರೆ, ಕುರುಬರು ಹಿಂದಿನ ಕಾಲದಲ್ಲಿ ಸೈನಿಕರು, ನಾಯಕರು ಆಗಿದ್ದರೆಂದು ಈ ನೃತ್ಯ ತೋರಿಸುತ್ತದೆ. ಕುರುಬ ವಂಶಸ್ಥರು ಪಾರಂಪರಿಕವಾಗಿ ಈ ನೃತ್ಯವನ್ನು ತಲತಲಾಂತರದಿಂದ ಮಾಡಿಕೊಂಡು ಬಂದವರು. ಜನಪದದಲ್ಲೇ ಉಳಿದುಕೊಂಡ ಈ ಕಲೆಗೆ ಪ್ರೋತ್ಸಾಹ ನೀಡಲು ಇತ್ತೀಚೆಗೆ ಸಾಮಾನ್ಯವಾಗಿ ದಸರಾ ಸಂಭ್ರಮದಲ್ಲಿ, ವಸಂತಹಬ್ಬ ಹಾಗೂ ಇತರೆ ಸಂದರ್ಭಗಳಲ್ಲಿ ಇತರೆ ಕಾರ್ಯಕ್ರಮಗಳೊಂದಿಗೆ ಡೊಳ್ಳು ಕುಣಿತದ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಯಾವುದೇ ದೊಡ್ಡ ಕಾರ್ಯಕ್ರಮ ನಡೆದರೂ ಅಲ್ಲಿ ಡೊಳ್ಳು ಕುಣಿತ ಇರುತ್ತದೆ

No comments:

Post a Comment